Published
2 years agoon
By
Akkare News
ಮಂಗಳೂರು : ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.ದೇಶದಿಂದ ದೇಶಕ್ಕೆ ಪ್ರಜ್ವಲ್ ರೇವಣ್ಣ ಅವರು ಹಾರುತ್ತಿದ್ದಾರೆ.ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಅವರು ಆಗಮಿಸುವ ಸಾಧ್ಯತೆ ಇರುವುದರಿಂದ ಅವರನ್ನು ಬಂಧಿಸಲು ಎಸ್‌ಐಟಿ ಸಕಲ ಸಿದ್ಧತೆ ಮಾಡಿಕೊಂಡಿದೆ.
ಸದ್ಯ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದ ಇಮಿಗ್ರೇಶನ್ ಬಳಿಯೇ ಎಸ್ ಐಟಿ ಪ್ರಜ್ವಲ್ ರನ್ನ ಬಂಧಿಸುವ ಸಾಧ್ಯತೆ ಇದೆ. ಎನ್ನಲಾಗುತ್ತಿದೆ.
ಇನ್ನು ಮಂಗಳೂರು, ಕೊಚ್ಚಿ, ಗೋವಾ, ಬೆಂಗಳೂರಿನ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೂ ಅಲ್ಲೇ ಬಂಧಿಸಿ, ಸ್ಥಳೀಯ ಠಾಣೆಗೆ ಕರೆದೊಯ್ಯಲಾಗುತ್ತದೆ. ಬಳಿಕ ಪ್ರಜ್ವಲ್ ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ನಂತರ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆದುಕೊಂಡು ಹೋಗಲಿದ್ದಾರೆ ಎಂದು ವರದಿಯಾಗಿದೆ.