Connect with us

ಇಂದಿನ ಕಾರ್ಯಕ್ರಮ

ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿ

Published

on

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು.‌






ಮೇ. 5ರಂದು ಬೆಳಿಗ್ಗೆ ದೇವಳದಲ್ಲಿ ನಿತ್ಯ ಮಹಾಪೂಜೆ ನಡೆಯಿತು. ನಂತರ ಶಾಂತಿನಗರ ಪೂಜಾ ಮೈದಾನದಿಂದ ಭಜನೆಯೊಂದಿಗೆ ಮೆರವಣಿಗೆ ಮೂಲಕ ಸಾಗಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು. ಬಳಿಕ ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.

ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ, ನಿಕಟಪೂರ್ವ ಆಡಳಿತ ಮೊಕ್ತೇಸರ ಯು‌.ಜಿ.ರಾಧ, ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಸಹಿತ ಹಲವರು ಭಾಗವಹಿಸಿದ್ದರು.‌

ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ. 6ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 9ರಿಂದ ಶ್ರೀ ಗಣಪತಿ ಹವನ, ಕಲಶಪೂಜೆ ಪ್ರಾರಂಭ, ಅಶ್ವತ್ಥ ಕಲ್ಪೋಕ್ತ ಪೂಜೆ, ಶ್ರೀ ರಕ್ತೇಶ್ವರಿ ಸಹಿತ ಪರಿವಾರ ದೈವಗಳಿಗೆ ತಂಬಿಲ, ಶ್ರೀ ನಾಗದೇವರಿಗೆ ತಂಬಿಲ, ಶ್ರೀ ಸತ್ಯನಾರಾಯಣ ಪೂಜೆ, ಕಲಶಪೂಜೆ ಮತ್ತು ಕಲಶಾಭಿಷೇಕ ನಡೆಯಲಿದೆ.







ಬೆಳಿಗ್ಗೆ 10ರಿಂದ 12.30ರವರೆಗೆ ಮಡಂತ್ಯಾರು ಶ್ರುತಿಲಯ ಕ್ಲಾಸಿಕಲ್ಸ್ ಇದರ ವಿದುಷಿ ಶ್ಯಾಮಲಾ ನಾಗರಾಜ್ ಭಟ್ ಕುಕ್ಕಿಲ ಮತ್ತು ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಜರಗಲಿದೆ. ಮಧ್ಯಾಹ್ನ 12.30ರಿಂದ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದ್ದು ಅಪರಾಹ್ನ 3ರಿಂದ ಸಂಜೆ 7ರವರೆಗೆ ಆದರ್ಶನಗರ ಶ್ರೀರಾಮ ಭಜನಾ ಮಂಡಳಿ, ಉಪ್ಪಿನಂಗಡಿ ರಾಮನಗರ ಶ್ರೀ ಶಾರದಾ ಮಹಿಳಾ ಭಜನಾ ಮಂಡಳಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿ, ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂಡಳಿ ಮತ್ತು ಶಾಂತಿನಗರ ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಸೇವೆ ನಡೆಯಲಿದೆ.

ರಾತ್ರಿ 7.15ರಿಂದ ಶ್ರೀ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 8ರಿಂದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ)ದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ನಂತರ ಜಿಲ್ಲೆಯ ಸುಪ್ರಸಿದ್ಧ ಆಯ್ದ ಕಲಾವಿದರ ಕೂಡುವಿಕೆಯಲ್ಲಿ ಸತೀಶ್ ಆಚಾರ್ಯ ಮಾಣಿರವರ ಸಂಯೋಜನೆಯೊಂದಿಗೆ ಶ್ರೀಕೃಷ್ಣ ಲೀಲಾಮೃತ ಯಕ್ಷಗಾನ ಬಯಲಾಟ ನಡೆಯಲಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement