Published
8 months agoon
By
Akkare Newsಮೈಸೂರು ಜಿಲ್ಲೆ ಹುಣಸೂರಿನ ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ರೇವಣ್ಣ ಅವರನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು 17ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ವೈದ್ಯಕೀಯ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು. ವಾದ-ಪ್ರತಿವಾದವನ್ನು ಆಲಿಸಿದ ಕೋರ್ಟ್ ನ್ಯಾಯಾಧೀಶರು, ರೇವಣ್ಣರನ್ನು 4 ದಿನಗಳ ಕಾಲ ಎಸ್‌ಐಟಿ ವಶಕ್ಕೆ ಒಪ್ಪಿಸಿದೆ.
ಮಾಜಿ ಸಚಿವರ ವಿರುದ್ಧ ಸುಮಾರು 15 ಕ್ಕೂ ಹೆಚ್ಚು ಅಂಶಗಳನ್ನು ಉಲ್ಲೇಖಿಸಿ ಎಸ್‌ಐಟಿ 5 ದಿನ ಕಸ್ಟಡಿಗೆ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿತು.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಪರ ವಕೀಲರು ಎಸ್‌ಐಟಿ ಕಸ್ಟಡಿಗೆ ನೀಡುವುದನ್ನು ವಿರೋಧಿಸಿ ಆರೋಗ್ಯ ಸಮಸ್ಯೆ ಇರುವುದರಿಂದ ಕಸ್ಟಡಿಗೆ ನೀಡದಂತೆ ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ಅಂದ್ರೆ ಮೇ 8ವರೆಗೆ ಎಸ್ ಐಟಿ ಕಸ್ಟಡಿಗೆ ನೀಡಿ ಮಹತ್ವದ ಆದೇಶ ನೀಡಿದ್ದಾರೆ.