ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಓರ್ವ ಪ್ರಭಾವಿ ನಾಯಕನನ್ನು ಕಳೆದುಕೊಂಡೆವು. ಮಾಜಿ ಶಾಸಕ ವಸಂತಬಂಗೇರ ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ

Published

on

ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿಯಲ್ಲಿ ೫ ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಇಂದಿಗೂ ಜನ ಮಾನಸದಲ್ಲಿ ಜೀವಂತವಾಗಿದ್ದಾರೆ. ನೇರ ನಡೆ, ನುಡಿಯ ಮೂಲಕ ಜನಪ್ರಿಯತೆಯನ್ನುಗಳಿಸಿದ್ದ ಅವರು ಬಡವರ ಪಾಲಿನ ಆಶಾಕಿರಣವಾಗಿದ್ದರು.







ತನ್ನ ಶಾಸಕತ್ವದ ಅವಧಿಯಲ್ಲಿ ಬೆಳ್ತಂಗಡಿಯ ಅಭಿವೃದ್ದಿಗೆ ಕಾರಣರಾಗಿದ್ದರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅಪಾರ ಜನಮನ್ನನೆಗಳಿಸಿದ್ದ ಅವರು ೨೫ ವರ್ಷಗಳ ಕಾಲ ಒಂದು ಕ್ಷೇತ್ರದ ಜನರ ಪ್ರತಿನಿಧಿಯಾಗಿದ್ದವರು.

ಇವರ ಅಗಲುವಿಕೆ ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟವುಂಟುಮಾಡಿದ್ದು ಮಾತ್ರವಲ್ಲದೆ ಬಡವರ ಪಾಲಿಗೆ ಇವರ ಅಗಲುವಿಕೆ ತುಂಬಲಾರದ ನಷ್ಟವಾಗಿದೆ. ಇವರ ಅಗಲುವಿಕೆಯನ್ನು ಸಹಿಸುವ ಶಕಲ್ತಿ ಪರಮಾತ್ಮನು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ

Continue Reading
Click to comment

Leave a Reply

Your email address will not be published. Required fields are marked *

Advertisement