ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ನೇರ ನಡೆ-ನುಡಿ ಮತ್ತು ಭ್ರಷ್ಟಾಚಾರ ರಹಿತ ರಾಜಕಾರಣಿ , ರಾಜಕೀಯ ರಹಿತ ಜನಸೇವಕ, ಬೆಳ್ತಂಗಡಿಯ ಮಾಜಿ ಶಾಸಕ. ಕಾಂಗ್ರೆಸ್ ಮುಖಂಡ ವಸಂತ ಬಂಗೇರ ನಿಧನ

Published

on

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ, ಹಿರಿಯ ಕಾಂಗ್ರೆಸಿಗ ಕೆ.ವಸಂತ ಬಂಗೇರ (79) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1946ರ ಜನವರಿ 15ರಂದು ಕೇದೆ ಸುಬ್ಬ ಪೂಜಾರಿ ದೇವಕಿ ದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಬಂಗೇರ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಅವರು ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.







ಬೆಳ್ತಂಗಡಿಗೆ ಐದು ಬಾರಿ ಶಾಸಕರಾಗಿದ್ದ ಇವರು ರಾಜ್ಯ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತು, ಗೆಲವು ಸಾಧಿಸಿ ತಮ್ಮ ಹೆಸರಲ್ಲಿ ಇತಿಹಾಸ ಸೃಷ್ಟಿಸಿದ್ದರು.
ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ.

Continue Reading
Click to comment

Leave a Reply

Your email address will not be published. Required fields are marked *

Advertisement