Published
8 months agoon
By
Akkare Newsಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ.
ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು. 1985 ರಲ್ಲಿ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಇಬ್ಬರು ಶಾಸಕರು ಮಾತ್ರ ಇದ್ದರು.
ಒಬ್ಬರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಸಂತ ಬಂಗೇರ. ಕರ್ನಾಟಕದ ರಾಜಕಾರಣದಲ್ಲಿ ಬಂಗೇರ ಅವರು ಸದಾ ನೆನಪಿನಲ್ಲಿ ಉಳಿಯುವ ವ್ಯಕ್ತಿಯಾಗಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಮೋಕ್ಷ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.