ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ

Published

on

ಬೆಳ್ತಂಗಡಿ : ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ವ್ಯಕ್ತಪಡಿಸಿದ್ದಾರೆ.ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ.

ಪ್ರಜಾಪ್ರಭುತ್ವಕ್ಕೆ ಕರಾಳವಾಗಿ ಜಾರಿಯಾಗಿದ್ದ ತುರ್ತುಪರಿಸ್ಥಿತಿ ವಿರುದ್ಧ ವಸಂತ ಬಂಗೇರರ ಹೋರಾಟ, 1983-85ರ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮಗಳ ಜನತೆ ಮಂಗನ ಖಾಯಿಲೆಯಿಂದ ತತ್ತರಿಸಿದಾಗ ಮಿಡಿದ ಅವರ ಸಹೃದಯಿ ಮನ. ಬಗರ್ ಹುಕುಂ ಸಾಗುವಳಿದಾರರ ಪರವಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಅವರು ನಡೆಸಿದ ಜಾಥಾ ಇಂದಿಗೂ ಜನತೆಯ ಮನದಲ್ಲಿ ಹಚ್ಚ ಹಸಿರು.







ಬಂಗೇರ ಅವರ ನಿಧನ ವೈಯಕ್ತಿಕವಾಗಿಯೂ ತಾಲೂಕಿನ ಜನತೆಗೆ ಅಪಾರ ದುಃಖವನ್ನು ತಂದಿದ್ದು, ಸದ್ಗತಿ ಪ್ರಾಪ್ತಿಯಾಗಲಿ ಎಂದು ಶಾಸಕ ಹರೀಶ್ ಪೂಂಜ ನುಡಿನಮನ ಸಲ್ಲಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement