Published
8 months agoon
By
Akkare Newsಬೆಂಗಳೂರು: ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ವಕೀಲೆ ಸಂಜಯನಗರ ಠಾಣಾ ವ್ಯಾಪ್ತಿಯ ಮನೆ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಹೈಕೋರ್ಟ್ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ, ಅಣ್ಣಯ್ಯ ಲೇಔಟ್ನಲ್ಲಿ ವಾಸವಿದ್ದರು. ಇನ್ನು ಇವರ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸ್ಟಿಸೆಂಟ್ ಕಮೀಷನರ್ ಆಗಿದ್ದಾರೆ.
ವೃತ್ತಿಯಲ್ಲಿ ವಕೀಲೆಯಾಗಿದ್ದ ಇವರು ಪ್ರವೃತ್ತಿಯಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು. ದಂಪತಿ ನಡುವೆ ವೈಮನಸ್ಸು ಇತ್ತು ಎನ್ನಲಾಗಿದೆ. ಮನೆಯವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಮೃತದೇಹವನ್ನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.