ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಸುದ್ದಿ ಬಿಡುಗಡೆ ಸಂಪಾದಕರಾಗಿ ಪದೋನ್ನತಿ ಪಡೆದ ಸಂತೋಷ್ ಕುಮಾರ್

Published

on

ಪುತ್ತೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ನೂತನ ಸಂಪಾದಕರಾಗಿ ಸಂತೋಷ್ ಕುಮಾರ್ ಶಾಂತಿನಗರ ಅವರು ಪದೋನ್ನತಿ ಪಡೆದಿದ್ದಾರೆ.

ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಮನೆ ಮಾತಾಗಿರುವ ಸುದ್ದಿ ಬಿಡುಗಡೆ ಪತ್ರಿಕೆಯ ಮಾಲಕರಾದ ಡಾ. ಯು.ಪಿ. ಶಿವಾನಂದ ಅವರು ಸಂತೋಷ್ ಅವರನ್ನು ಸಂಪಾದಕರಾಗಿ ನಿಯೋಜಿಸಿದ್ದಾರೆ. ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಮತ್ತು ಸುದ್ದಿ ನ್ಯೂಸ್ ಚಾನೆಲ್ ಮುಖ್ಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಸಂತೋಷ್ ಕುಮಾರ್ ಅವರು ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಸ್ಥಾನೀಯ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇದೀಗ ಪ್ರಮೋಷನ್ ನೀಡಲಾಗಿದ್ದು ಸಂಪಾದಕ ಸ್ಥಾನ ಅಲಂಕರಿಸಿದ್ದಾರೆ. ಕಿರಿಯ ವಯಸ್ಸಿನಲ್ಲಿ ಹಿರಿಯ ಹುದ್ದೆ ಅಲಂಕರಿಸಿರುವ ಸಂತೋಷ್ ಅವರು ರಾಜಕೀಯ ಮತ್ತು ಕ್ರೈಂ ವರದಿಗಾರಿಕೆಯಲ್ಲಿ ಪಳಗಿದವರು.







ಕಾರ್ಯಕ್ರಮ ನಿರೂಪಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಸಂಘಟಕರಾಗಿ, ಭಾಷಣಗಾರರಾಗಿಯೂ ಗುರುತಿಸಿಕೊಂಡಿರುವ ಸಂತೋಷ್ ಅವರು ವಿವಿಧ ಸಮಾಜಮುಖಿ ಚಟುವಟಿಕೆಗಳಲ್ಲಿ ಮತ್ತು ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ರಾಜ್ಯಶಾಸ್ತ್ರದಲ್ಲಿ ಎಂ.ಎ. ಸ್ನಾತಕೋತ್ತರ ಪದವೀಧರರಾಗಿರುವ ಸಂತೋಷ್ ಕುಮಾರ್ ಶಾಂತಿನಗರ ಅವರು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಸ್ಥಾಪಕಾಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement