Published
7 months agoon
By
Akkare Newsಬೆಳ್ತಂಗಡಿ :ಮೇ 13: ಒಂಟಿ ಸಲಗವೊಂದು ರಾತ್ರಿ ಇದ್ದಕ್ಕಿದ್ದ ಹಾಗೆ ರಸ್ತೆ ಮಧ್ಯೆ ಬಂದ ಕಾರಣ ಬೊಲೇರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಒಂಟಿ ಸಲಗವೊಂದು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ತಿರುಗಾಡುತ್ತಿತ್ತು, ನಿನ್ನೆ ಚಾರ್ಮಾಡಿ ಘಾಟ್ ಒಂದನೇ ತಿರುವಿನಲ್ಲಿ ಒಂಟಿ ಸಲಗ ಮತ್ತೆ ಪ್ರತ್ಯಕ್ಷವಾಗಿದೆ.
ಬೊಲೇರೊ ವಾಹನಕ್ಕೆ ಒಂಟಿ ಸಲಗ ಅಡ್ಡ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ
ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೊಲೇರೊ ವಾಹನ ಚಾಲಕ ಒಂಟಿ ಸಲಗವನ್ನು ನೋಡಿ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಬೊಲೇರೊ ಚರಂಡಿಗೆ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸ್ಥಳೀಯರು ಬಂದು ವಾಹನವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆಯವರು ಭೇಟಿ ನೀಡಿದ್ದಾರೆ.