Published
7 months agoon
By
Akkare Newsಕಾಣಿಯೂರು: ಕಾಣಿಯೂರು ಶ್ರೀ ವೈದಿಕ, ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಅನಾವರಣ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸಮಾಲೋಚನೆ ಸಭೆ ಮತ್ತು ಸುವರ್ಣ ಮಹೋತ್ಸವದ ಪ್ರಯುಕ್ತ ಮೇ 21, 22ರಂದು ನಡೆಯಲಿರುವ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮದ ಆಗಾಗೆ ಬರುವ ಮಾರು ಬದನ ಹಾಲು ನಂ.1 ಆಮಂತ್ರಣವನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಮೇ 13ರಂದು ಅನಾವರಣಗೊಳಿಸಲಾಯಿತು.
ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಸುವರ್ಣ ಮಹೋತ್ಸವದ ಸಮಿತಿ ಕಾರ್ಯಾಧ್ಯಕ್ಷರೂ ಆಗಿರುವ ಪದ್ಮಯ್ಯ ಗೌಡ ಅನಿಲರವರು ಆಮಂತ್ರಣವನ್ನು ಅನಾವರಣಗೊಳಿಸಿದರು. ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಅಧ್ಯಕ್ಷತೆ ವಹಿಸಿದ್ದರು. ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಸ್ಥಿತರಿದ್ದರು.
ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಪ್ರಯುಕ್ತ ಮೆ 21,22ರಂದು ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮ, ಮಹಾಗಣಪತಿ ಹೋಮ, ನರಸಿಂಹ ಹೋಮ, ಏಕಾಹ ಭಜನೆ, ಸತ್ಯನಾರಾಯಣ ಪೂಜೆ ಉದ್ಯಾಪನೆ ಕಾರ್ಯಕ್ರಮ ಹಾಗೂ ಭಜನಾ ಮಂಗಲೋತ್ಸವ ನಡೆಯಲಿದೆ.
ಉಪಾಧ್ಯಾಯ ಕಲ್ಪಡ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.ಕಾರ್ಯದರ್ಶಿ ಜಯಂತ ಅಬೀರ ಸ್ವಾಗತಿಸಿ, ವಂದಿಸಿದರು.