Published
7 months agoon
By
Akkare Newsಮಂಗಳೂರು(ಬೆಂಗಳೂರು): ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ.29 ರಿಂದ ಶಾಲೆಗಳು ಪುನರಾರಂಭಗೊಳ್ಳಲಿದೆ.
ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244 ದಿನ ಶಾಲಾ ಕರ್ತವ್ಯದ ದಿನಗಳು ಎಂದು ನಿಗದಿ ಪಡಿಸಲಾಗಿದೆ. ಮಕ್ಕಳು ಮತ್ತು ಶಿಕ್ಷಕರಿಗೆ 121 ದಿನಗಳ ಒಟ್ಟಾರೆ ರಜೆ ಸಿಗಲಿದೆ. ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2024 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ.
ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಿದೆ.