Published
7 months agoon
By
Akkare Newsಸುಬ್ರಹ್ಮಣ್ಯ: ಭಾರೀ ಮಳೆಯ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಮಳೆ ಹಾನಿ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬೀನ್ ಮೊಹಾಪಾತ್ರ ಮತ್ತು ಕಡಬ ತಾಲೂಕು ತಹಸೀಲ್ದಾರ್ ಉಪಸ್ಥಿತರಿದ್ದರು.
ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಜಿಲ್ಲಾಧಿಕಾರಿ ಮು ಮುಗಿಲನ್, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳಿಗೆ ಸೂಚಿಸಿದರು.ಕಳೆದ ಎರಡು ಮೂರು ದಿನಗಳಿಂದ ಕಡಬ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ