ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಂತರರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಇಂಡಿಯಾ ಮೈತ್ರಿಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

Published

on

ಕೋಲ್ಕತ್ತಾ ಮೇ 15: ಕಾಂಗ್ರೆಸ್ (Congress) ಜೊತೆಗಿನ ಭಿನ್ನಾಭಿಪ್ರಾಯದ ನಂತರ ಇಂಡಿಯಾ ಬಣದಿಂದ (INDIA bloc) ದೂರವಿದ್ದ ಬಂಗಾಳದ ಮುಖ್ಯಮಂತ್ರಿ (Mamata Banerjee) ಈಗ ಮತ್ತೆ ವಿರೋಧಪಕ್ಷಗಳ ಒಕ್ಕೂಟಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಸಾರ್ವತ್ರಿಕ ಚುನಾವಣೆಯ ನಂತರ ವಿರೋಧ ಪಕ್ಷ ಅಧಿಕಾರಕ್ಕೆ ಬಂದರೆ ತಾವು ಬಾಹ್ಯ ಬೆಂಬಲ ನೀಡುವುದಾಗಿ ಬಂಗಾಳದ ಮುಖ್ಯಮಂತ್ರಿ ಹೇಳಿದ್ದಾರೆ. “ನಾವು ಇಂಡಿಯಾ ಮೈತ್ರಿಕೂಟಕ್ಕೆ ನಾಯಕತ್ವವನ್ನು ನೀಡುತ್ತೇವೆ ಮತ್ತು ಹೊರಗಿನಿಂದ ಅವರಿಗೆ ಎಲ್ಲಾ ರೀತಿಯಲ್ಲಿ ಸಹಾಯ ಮಾಡುತ್ತೇವೆ. ಬಂಗಾಳದಲ್ಲಿ ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ಎಂದಿಗೂ ಸಮಸ್ಯೆಯಾಗದಂತೆ ನಾವು ಸರ್ಕಾರವನ್ನು ರಚಿಸುತ್ತೇವೆ. 100 ದಿನಗಳ- ಉದ್ಯೋಗ ಯೋಜನೆಯಲ್ಲಿ ಕೆಲಸ ಮಾಡುವವರು ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದಿದ್ದಾರೆ ಮಮತಾ




ಇಂಡಿಯಾ ಬಣದ ಬಗ್ಗೆ ತಮ್ಮ ವ್ಯಾಖ್ಯಾನವನ್ನು ಸ್ಪಷ್ಟಪಡಿಸಿದ ಮಮತಾ, ಇದು ಸಿಪಿಎಂ ಅಥವಾ ಬಂಗಾಳ ಕಾಂಗ್ರೆಸ್ ಅನ್ನು ಒಳಗೊಂಡಿಲ್ಲ, ಇದು ಸಾಂಪ್ರದಾಯಿಕ ಪ್ರತಿಸ್ಪರ್ಧಿ ಮತ್ತು ಹಿರಿಯ ಕಾಂಗ್ರೆಸ್‌ ನಾಯಕ ಅಧೀ‌ರ್ ಚೌಧರಿ ನೇತೃತ್ವವನ್ನು ಹೊಂದಿದೆ ಎಂದಿದ್ದಾರೆ. ಇಂಡಿಯಾ ಮೈತ್ರಿಕೂಟ ಬಂಗಾಳ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಅನ್ನು ಲೆಕ್ಕಿಸಬೇಡಿ, ಆ ಇಬ್ಬರು ನಮ್ಮೊಂದಿಗಿಲ್ಲ ಎಂಬುದು ನಿಮಗೆ ತಿಳಿದಿರಬೇಕು. ಇವರಿಬ್ಬರು ಬಿಜೆಪಿಯಲ್ಲಿದ್ದಾರೆ. ನಾನು ದೆಹಲಿಯ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
“ಬಿಜೆಪಿ 400 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳುತ್ತಿದೆ, ಆದರೆ ಈ ಬಾರಿ ಅದು ಆಗುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ನಾವು (ಟಿಎಂಸಿ) ಕೇಂದ್ರದಲ್ಲಿ ಸರ್ಕಾರ ರಚಿಸಲು ಇಂಡಿಯಾ ಬಣವನ್ನು ಹೊರಗಿನಿಂದ ಬೆಂಬಲಿಸುತ್ತೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇಂಡಿಯಾ ಬ್ಲಾಕ್ 300 ರಿಂದ 315 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಬಿಜೆಪಿ 195 ಸ್ಥಾನಗಳನ್ನು ಮಾತ್ರ ಗೆಲ್ಲುತ್ತದೆ ಎಂದು ಬಂಗಾಳ ಮುಖ್ಯಮಂತ್ರಿ ಈ ಹಿಂದೆ ಹೇಳಿದ್ದರು.
2019 ರ ಚುನಾವಣೆಯಲ್ಲೂ ಟಿಎಂಸಿ ಎಲ್ಲಾ 42 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್‌ ಮತ್ತು ಎಡಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಈ ಬಾರಿಯೂ ಅದೇ ಸಮೀಕರಣ ಪುನರಾವರ್ತನೆಯಾಗಿದ್ದು, ರಾಜ್ಯದಲ್ಲಿ – ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಟಿಎಂಸಿ ವಿರುದ್ಧ ಕಾಂಗ್ರೆಸ್‌-ಎಡ ಮೈತ್ರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version