Published
7 months agoon
By
Akkare News
ಪುತ್ತೂರು ಮೇ,18:ಮಾಣಿ ಮೈಸೂರು ರಾ.ಹೆದ್ದಾರಿ 275 ರ ಕಲ್ಲರ್ಪೆಯ ಅಪಾಯಕಾರಿ ತಿರುವಿನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಯಿತು. ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಇಲ್ಲಿನ ಅಪಾಯದ ಬಗ್ಗೆ ಶಾಸಕರ ಗಮನಕ್ಕೆ ತಂದಿದ್ದರು. ಆ ಬಳಿಕ ಸ್ಥಳ ವೀಕ್ಷಣೆ ಮಾಡಿದ ಶಾಸಕರು ತೆರವು ಮಾಡುವಂತೆ ಹೈವೇ ಇಂಜಿನಿಯರ್ ಗೆ ಸೂಚನೆ ನೀಡಿದ್ದರು. ಇಂದು ಅಗಲೀಕರಣ ಕಾಮಗಾರಿ ಆರಂಭಗೊಂಡಿದ್ದು ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.