Published
7 months agoon
By
Akkare Newsಮಂಗಳೂರು:ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮೇ19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ ಮಿಂಚು, ಗುಡುಗು ಸಿಡಿಲುಗಳಿಂದ ಕೂಡಿದ ಭಾರೀ ಮಳೆಯಾಗಲಿದೆ.ಜಿಲ್ಲೆಯ ಕೆಲವೆಡೆ 11.55 ಸೆಂ.ಮೀನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಎರಡು ದಿನಗಳಲ್ಲಿ ಗುಡುಗು ಸಿಡಿಲುಗಳಿಂದ ಕೂಡಿದ ಮಳೆಯಾಗಲಿದೆ.ಕೆಲವೆಡೆ 6.45 ಸೆಂ.ಮೀ.ಯಿಂದ 11.55 ಸೆಂ.ಮೀ. ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.