Published
7 months agoon
By
Akkare News
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21 ಮಂಗಳವಾರ ಬೆಳ್ತಂಗಡಿಗೆ ಆಗಮಿಸಲಿದ್ದಾರೆ.
ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ ಮೂಲಕ ಗುರುವಾಯನಕೆರೆಯ ಎಫ್.ಎಂ ಗಾರ್ಡನ್ ನಲ್ಲಿ ನಡೆಯುವ ದಿ ಕೆ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದಾರೆ.