ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆPublished
2 years agoon
By
Akkare News
ಟೆಹ್ರಾನ್: ಅಜರ್ಬೈಜಾನ್ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ. ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು ಮೃತಪಟ್ಟಿದ್ದಾರೆ ಎಂದು ಇದೀಗ ಖಚಿತಪಡಿಸಲಾಗಿದೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹೊಸೇನ್ ಅಮೀರಬ್ ದೊಲ್ಲಾಹಿಯನ್ ಮತ್ತು ಇರಾನ್ನ ಪರಮೋಚ್ಚ ನಾಯಕ ಖೊಮೇನಿಯವರ ಪ್ರತಿನಿಧಿ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿತ್ತು.
ಇರಾನ್ ಮಾಧ್ಯಮಗಳ ಪ್ರಕಾರ, ಹೆಲಿಕಾಪ್ಟರ್ನ ಅವಶೇಷಗಳು ಪತ್ತೆಯಾದ ಕೆಲವೇ ನಿಮಿಷಗಳಲ್ಲಿ, ಇರಾನ್ ಅಧ್ಯಕ್ಷ ರೈಸಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ವಿಮಾನದಲ್ಲಿದ್ದ ಇರಾನ್ ವಿದೇಶಾಂಗ ಸಚಿವರೂ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.
ರವಿವಾ ಪರ್ವತಗಳಲ್ಲಿ ಪತನಗೊಂಡ ಹೆಲಿಕಾಪ್ಟರ್ ನ ಅವಶೇಷಗಳನ್ನು ರಕ್ಷಣಾ ತಂಡ ಪತ್ತೆ ಮಾಡಿದೆ.
ಅಧ್ಯಕ್ಷರ ಹೆಲಿಕಾಪ್ಟರ್ಗೆ ಬೆಂಗಾವಲಾಗಿ ತೆರಳಿದ್ದ ಇನ್ನೆರಡು ಹೆಲಿಕಾಪ್ಟರ್ಗಳು ವಾಪಸಾಗಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸಂಭವಿಸಿದ ಸ್ಥಳ ಇರಾನ್ನ ದೊಡ್ಡ ಪಟ್ಟಣಗಳಲ್ಲಿ ಒಂದಾಗಿರುವ ತಬ್ರಿಜ್ನಿಂದ ಸುಮಾರು 100 ಕಿ.ಮೀ. ದೂರದಲ್ಲಿದೆ. ಪ್ರತಿಕೂಲ ಹವಾಮಾನ, ರಾತ್ರಿಯಾದ ಕಾರಣ ಶೋಧ ಕಾರ್ಯಕ್ಕೆ ಅಡ್ಡಿಯಾಗಿತ್ತು.
ಇರಾನ್ ನ ರಾಜಧಾನಿ ಟೆಹ್ರಾನ್ ನಿಂದ ಸುಮಾರು 600 ಕಿಲೋಮೀಟರ್ ದೂರದಲ್ಲಿರುವ ವಾಯುವ್ಯ ಇರಾನ್ ನಲ್ಲಿರುವ ಅಜೆರ್ಬೈಜಾನ್ನ ಗಡಿಗೆ ಭೇಟಿ ನೀಡಿ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.