Published
11 months agoon
By
Akkare Newsಮಂಗಳೂರು(ನೆಲ್ಯಾಡಿ) ಮೇ.21 : ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲೈದು ಮಂದಿ ಗಾಯ ಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಮೇಲ್ಕಾರು ಸಮೀಪದ ರೆಂಗೇಲು ನಿವಾಸಿ ಶಬೀರ್ ಎಂಬವರ ಪತ್ನಿ ಸಫೀಯಾ ಮತ್ತು ಪುತ್ರ ಶಫೀಕ್(47) ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಕಾರು ಶಿರಾಡಿ ಘಾಟ್ ನ ಕೆಂಪು ಹೊಳೆ ಸಮೀಪಿಸುತ್ತಿದ್ದಂತೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿದ್ದ ತಾಯಿ, ಮಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.