Published
7 months agoon
By
Akkare News
ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು, ಕಾರು ಜಖಂಗೊಂಡು ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ.
ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಜೋರಾಗಿ ಮಳೆ ಸುರಿಯುತ್ತಿದ್ದು, ಈ ವೇಳೆ ಜೋರಾದ ಗಾಳಿ ಮಳೆಗೆ ಹೆದ್ದಾರಿಯ ಬದಿಯಲ್ಲಿದ್ದ ಮರ ಚಲಿಸುತ್ತಿದ್ದ ಕಾರಿನ ಮೇಲೆ ವಿದ್ಯುತ್ ತಂತಿ ಸಹಿತ ಉರುಳಿ ಬಿದ್ದಿದ್ದು, ಕಾರು ಜಖಂ ಗೊಂಡಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು,ರಸ್ತೆಯಲ್ಲಿದ್ದ ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆದಿದೆ