Published
7 months agoon
By
Akkare Newsಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಮೇ 23 ಗುರುವಾರ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಪಾಲ್ಗೊಳ್ಳುವರು. ಅಲ್ಲದೆ ಸೀಮೆಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ದೇವಸ್ಥಾನಗಳ ಆಡಳಿತ ಮಂಡಳಿ ಅಧ್ಯಕ್ಷರು, ದೈವಸ್ಥಾನಗಳ ಆಡಳಿತ ಮಂಡಳಿ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳುವಂತೆ ಶ್ರೀ ಕ್ಷೇತ್ರ ಶರವೂರಿನ ಆಡಳಿತಾಧಿಕಾರಿ ಗೋಪಾಲ ಕೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ