Published
2 years agoon
By
Akkare News
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಇಂದು ಸಂಜೆ ಬೆಳ್ತಂಗಡಿ ಪೊಲೀಸು ಠಾಣಾ ಪೊಲೀಸ್ ನಿರೀಕ್ಷಕ ಹಾಗೂ ತನಿಖಾಧಿಕಾರಿಯಾದ ಬಿ. ಜಿ. ಸುಬ್ಬಾಪೂರ ಮಠ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ತೆರಳಿದ್ದರು.
ಇದೀಗ ನೋಟಿಸ್ ನೀಡಿದ ಹಿನ್ನೆಲೆ ಶಾಸಕ ಹರೀಶ್ ಪೂಂಜ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.ಸದ್ಯ ವಿಚಾರಣೆ ನಡೆಯತ್ತಿದೆ ಎನ್ನಲಾಗಿದೆ.ಇನ್ನು ಇದೀಗ ಪೊಲೀಸ್ ಠಾಣೆಗೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಕೂಡ ಆಗಮಿಸಿದ್ದಾರೆ.