Published
7 months agoon
By
Akkare Newsರಾಜ್ಯದಲ್ಲಿ ಮತ್ತೆ ನಿರಂತರ ಮದ್ಯ ಮಾರಾಟಕ್ಕೆ ತೆರೆ ಬೀಳಲಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಇನ್ನೊಂದೆಡೆ ವಿಧಾನ ಪರಿಷತ್ ಚುನಾವಣೆಯ ಬಿಸಿಯ ನಡುವೆ ಮದ್ಯ ಪ್ರಿಯರಿಗೆ ಚುನಾವಣಾ ಆಯೋಗ ಶಾಕಿಂಗ್ ನೀಡಿದೆ.
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ ಜೂನ್ 4 ರಂದು ನಡೆಯಲಿದ್ದು, ಈ ಸಂಬಂಧ ಜೂನ್ 3ರ ಸಂಜೆ 5 ರಿಂದ ಜೂನ್ 4 ರಾತ್ರಿ 12 ವರೆಗೆ ಮದ್ಯ ಮಾರಾಟ ನಿಷೇಧ ಹೇರಿ ಆದೇಶ ಹೊರ ಬೀಳಲಿದೆ. ಇನ್ನೊಂದೆಡೆ ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ನಿರಂತರ ನಾಲ್ಕು ದಿನ ಮದ್ಯ ಮಾರಾಟ ನಿಷೇಧ ಇರುತ್ತದೆ.
ರಾಜ್ಯದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ಜೂನ್ 1 ರಂದು ಸಂಜೆ 5 ಗಂಟೆಯಿಂದ ಜೂನ್ 3 ರ ಮಧ್ಯರಾತ್ರಿ 12 ರ ವರೆಗೆ ಎಲ್ಲಾ ರೀತಿಯಇರುತ್ತದೆ. ಡಿ, ಮದ್ಯಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಲರಿ, ಸ್ಟಾರ್ ಹೋಟೆಲ್‌ಗಳಲ್ಲಿ, ಶೇಂದಿ ಅಂಗಡಿ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.