Published
7 months agoon
By
Akkare Newsಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದದಿಂದ ನಡೆದುಕೊಂಡು ಬರುತ್ತಿರುವ ’ಹಲಸು ಮತ್ತು ಹಣ್ಣುಗಳ ಮೇಳ’ಕ್ಕೆ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ಚಾಲನೆ ನೀಡಲಾಯಿತು.ಮೇ 24 ರಿಂದ 26ರ ತನಕ ನಡೆಯುವ ಈ ಮೇಳವನ್ನು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ದೀಪ ಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ,ನವತೇಜ ಪುತ್ತೂರು ಇದರ ಟ್ರಸ್ಟಿ ಸುಹಾಸ್ ಮರಿಕೆ, ಜೆಸಿಐ ಉಪಾಧ್ಯಕ್ಷ ಅನೂಪ್ ಉಪಸ್ಥಿತರಿದ್ದರು.