ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ವಿಧಾನ ಪರಿಷತ್ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ,ಸಿ.ಟಿ.ರವಿ ಹೆಸರು

Published

on

Bengaluru: ಜೂನ್ 13ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 44 ಆಕಾಂಕ್ಷಿಗಳಿದ್ದು ಕೋರ್ ಕಮಿಟಿ 12 ಮಂದಿಯ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನೆ ಮಾಡಿದೆ.ಇದರಲ್ಲಿ ದ.ಕ.ಸಂಸದರೂ ಆಗಿರುವ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರೂ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಜಾತಿವಾರು ಹಾಗೂ ಪ್ರದೇಶವಾರು ಆಧರಿಸಿ 12 ಮಂದಿಯ ಅಂತಿಮ ಪಟ್ಟಿ ತಯಾರು ಮಾಡಲಾಗಿದ್ದು ಈ ಪೈಕಿ ಮೂವರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ.




ರಾಜ್ಯ ಬಿಜೆಪಿ ಕಚೇರಿಯಲ್ಲಿ ಮೇ 22ರಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಪಾಲ್ಗೊಂಡಿದ್ದರು.ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಗೆ ಮೂರು ಸ್ಥಾನ ಸಿಕ್ಕಿದ್ದು, ಆ ಮೂರು ಸ್ಥಾನಕ್ಕೆ ಪಟ್ಟಿ ಸಿದ್ದಪಡಿಸುವ ಕುರಿತು ಆಕಾಂಕ್ಷಿಗಳ ಪಟ್ಟಿಯೊಂದಿಗೆ ಸಭೆಯಲ್ಲಿ ಚರ್ಚಿಸಲಾಯಿತು.ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಆಕಾಂಕ್ಷಿಗಳ ಪಟ್ಟಿಯಲ್ಲಿ ಇಲ್ಲದ ಹೆಸರುಗಳ ಬಗ್ಗೆಯೂ ಪ್ರಸ್ತಾಪಿಸಿ ಚರ್ಚೆ ನಡೆಸಲಾಗಿದೆ.

ಕಟೀಲ್‌ಗೆ ಪರಿಷತ್‌ನ ಪ್ರತಿಪಕ್ಷ ನಾಯಕ ಸ್ಥಾನ?: ಹಾಲಿ

ಸಂಸದನಾಗಿರುವ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರದ ಅವಧಿ ಇನ್ನೇನು ಮುಗಿಯಲಿದೆ.ಈ ಬಾರಿ ಲೋಕಸಭೆಗೆ ಅವರಿಗೆ ಅವಕಾಶ ನೀಡಲಾಗಿಲ್ಲ.

ಈ ನಿಟ್ಟಿನಲ್ಲಿ ಅವರನ್ನು ಪರಿಷತ್‌ ಸದಸ್ಯನಾಗಿ ಮಾಡುವ ಜೊತೆಗೆ ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಸ್ಥಾನ ನೀಡುವ ಕುರಿತು ಪಕ್ಷದ ಪ್ರಮುಖರು ತೀರ್ಮಾನಿಸಿದ್ದಾರೆ.ಪರಿಷತ್‌ನ ಪ್ರತಿಪಕ್ಷದ ನಾಯಕನಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ಈಗಾಗಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದಾರೆ.

ಪ್ರಮುಖರ ಪಟ್ಟಿಯಲ್ಲಿ: ಸದ್ಯ ರಾಜ್ಯ ಬಿಜೆಪಿ ಸಿದ್ಧಪಡಿಸಿರುವ

12 ಜನರ ಪಟ್ಟಿಯಲ್ಲಿ ನಳಿನ್ ಕುಮಾರ್ ಕಟೀಲ್‌, ಸಿ.ಟಿ.ರವಿ, ಎನ್.ರವಿ ಕುಮಾರ್, ಬಿಜೆಪಿ ಮರಾಠ ಮುಖಂಡ ಮಾರುತಿ ರಾವ್‌ ಮೂಳೆ, ಬಿಜೆಪಿ ಮರಾಠ ನಾಯಕಿ ಧನಶ್ರೀ ಸರ್‌ದೇಸಾಯಿ, ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನಾ, ಹಾವೇರಿ ಬಿಜೆಪಿ ನಾಯಕ ಬೋಜರಾಜು ಪ್ರಮುಖರಾಗಿದ್ದಾರೆ.ಡಿ.ವಿ.ಸದಾನಂದ ಗೌಡರ ಹೆಸರು ಸೇರ್ಪಡೆಯಾಗಿದೆಯೇ ಎನ್ನುವ ಖಚಿತ ಮಾಹಿತಿ ಲಭ್ಯವಾಗಿಲ್ಲ.ಸದ್ಯ ಬಿಜೆಪಿ ಹೈಕಮಾಂಡ್ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದು ಮೇ 30ರ ನಂತರವಷ್ಟೇ ರಾಜ್ಯ ಬಿಜೆಪಿ ಕಳಿಸಿರುವ ಪಟ್ಟಿ ಬಗ್ಗೆ ಗಮನ ಹರಿಸಲಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement