Published
7 months agoon
By
Akkare News
ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿದ ಪ್ರಭಾಕರ ಕೋರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.
ಉಭಯ ನಾಯಕರ ಭೇಟಿಗೆ ನಿಖರ ಕಾರಣ ತಿಳಿದುಬಂದಿಲ್ಲ ಆದರೆ ರಾಜ್ಯಸಭಾ ಸದಸ್ಯ, ಬಿಜೆಪಿ ಮುಖಂಡ ಪ್ರಭಾಕರ್ ಕೋರೆ ಹಾಗೂ ಡಿ.ಕೆ.ಶಿವಕುಮಾರ್ ಭೇಟಿ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.