Published
11 months agoon
By
Akkare Newsಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಇದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ..
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು
ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ
ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.
ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ
kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ. ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ.. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ. ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ. ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ.