Published
7 months agoon
By
Akkare Newsಬಂಟ್ವಾಳ: ಕಲ್ಲಡ್ಕದಲ್ಲಿ ಮೂರುದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿಯ ಸರ್ವಿಸ್ ರಸ್ತೆ ಸಂಪೂರ್ಣ ಕೆಸರುಮಯಗೊಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟುಮಾಡಿದೆ.
ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ನೇತೃತ್ವದಲ್ಲಿ ತಹಶೀಲ್ದಾರ್ ಅರ್ಚನಾ ಡಿ.ಭಟ್ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಕಳೆದ ವಾರ ಭೇಟಿನೀಡಿ ಕಾಮಗಾರಿ ಪರಿಶೀಲನೆ ನಡೆಸಿದ್ದರು. ಗುತ್ತಿಗೆ ಸಂಸ್ಥೆ ಎಂಜಿನಿಯರ್ ಜತೆ ಮಾತುಕತೆ ನಡೆಸಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವಂತೆ ಸೂಚಿಸಿದ್ದರು. ಆದರೆ, ಗುತ್ತಿಗೆ ಸಂಸ್ಥೆ ಇದಕ್ಕೆ ಸ್ಪಂದಿಸದ ಕಾರಣ ಸಾರ್ವಜನಿಕರು ಪರದಾಡುವಂತಾಗಿದೆ.