Published
7 months agoon
By
Akkare Newsಬೆಳ್ತಂಗಡಿ : ಮೇ 26: ಆರು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿ ಎಂಬವರ ಏಕೈಕ ಪುತ್ರ ಶೈಲೇಶ್ ಶೆಟ್ಟಿ(38) ಮೃತಪಟ್ಟವರು.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಇನ್ನಷ್ಟೆ ಮಾಹಿತಿ ತಿಳಿಯಬೇಕಾಗಿದೆ.