Published
7 months agoon
By
Akkare Newsಮಂಗಳೂರು/ಉಡುಪಿ: ಇದೀಗ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ಮಳೆಯಿಂದಾಗಿ ಸಮುದ್ರದ ನೀರಿನ ಮಟ್ಟ ಹಾಗೂ ಸೆಳೆತ ಹೆಚ್ಚಾಗಿರುತ್ತದೆ. ಹೀಗಾಗಿ ಮಳೆಗಾಲದಲ್ಲಿ ಬೀಚ್ ಗಳಿಗೆ ಭೇಟಿ ನೀಡುವ ಪ್ರವಾಸಿಗರ ರಕ್ಷಣೆಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಸಮುದ್ರದಲ್ಲಿ ಗೃಹರಕ್ಷಕ ದಳದ 26 ಪರಿಣಿತ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಸೋಮೇಶ್ವರ, ಉಳ್ಳಾಲ, ತಣ್ಣೀರು ಬಾವಿ, ಸುರತ್ಕಲ್, ಸಸಿಹಿತ್ಲು ಸಹಿತ ಪ್ರಮುಖ 8 ಬೀಚ್ ಗಳಲ್ಲಿ ಗೃಹರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತದೆ. ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಎರಡು ಹಂತದಲ್ಲಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಜೊತೆಗೆ ಈ ಸಿಬ್ಬಂದಿಗಳಿಗೆ ಸಮವಸ್ತ್ರಗಳನ್ನು ನೀಡಲಾಗುತ್ತಿದ್ದು, ಇದು ಕಾನೂನು ಪ್ರಕಾರ ಎಚ್ಚರಿಸಿ ಮುಂಜಾಗ್ರತೆ ವಹಿಸಲು ಸಹಕಾರಿಯಾಗಲಿದೆ.