ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಗುಜರಾತ್​ ಗೇಮಿಂಗ್‌ ಝೋನ್​ನಲ್ಲಿ ಬೆಂಕಿ ಅವಘಡ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ: ಕಟ್ಟೆಚ್ಚರ ವಹಿಸಲು ಡಿಸಿಎಂ ಖಡಕ್ ಸೂಚನೆ

Published

on

ಗುಜರಾತ್​ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 33ಕ್ಕೇರಿದೆ. ರಾಜ್​ಕೋಟ್​ನ ಟಿಆರ್​ಪಿ ಗೇಮಿಂಗ್ ಝೋನ್​ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು 9 ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 33 ಜನ ಸಜೀವ ದಹನವಾಗಿದ್ದಾರೆ. ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು , ಕರ್ನಾಟಕದ ಉಪ ಮುಖ್ಯಮಂತ್ರಿ, ಬೆಂಗಳೂರು ನಗರ ಉಸ್ತುವಾರಿ ಸಚಿವ ಡಿ. ಕೆ. ಶಿವಕುಮಾರ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ. ಸಂಭವನೀಯ ಅಗ್ನಿ ದುರಂತಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಪರಿಶೀಲಿಸಲು ಪತ್ರದಲ್ಲಿ ಸೂಚಿಸಿದ್ದಾರೆ.



ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್​​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್​ ಖಡಕ್​ ‌ಸೂಚನೆ ನೀಡಿದ್ದಾರೆ

ಈ ಕುರಿತಾಗಿ ಪತ್ರ ಬರೆದಿರುವ ಡಿಕೆ ಶಿವಕುಮಾರ್​, ಬೆಂಗಳೂರಿನಾದ್ಯಂತ ಶಾಪಿಂಗ್ ಮಾಲ್‌ಗಳು, ಗೇಮಿಂಗ್ ಮತ್ತು ಸಾಹಸ ವಲಯಗಳಂತಹ ಹೆಚ್ಚಾಗಿ ಜನದಟ್ಟಣೆ ಇರುವ ಮನರಂಜನಾ ಸ್ಥಳಗಳಲ್ಲಿ ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳು ಮತ್ತು ಮುನ್ನೆಚ್ಚರಿಕೆಗಳ ಅನುಸರಿಸುವುದು ಅತ್ಯಂತ ಮಹತ್ವದ್ದಾಗಿದೆ.

ಅಗ್ನಿ ಅವಘಡಗಳನ್ನು ತಪ್ಪಿಸುವುದಕ್ಕಾಗಿ ನಿಯಮಿತ ತಪಾಸಣೆಗಳನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ, ನಗರದಾದ್ಯಂತ ಮನರಂಜನಾ ಸ್ಥಳಗಳಲ್ಲಿ ಸುರಕ್ಷಿತ ಕ್ರಮಗಳನ್ನು ತ್ವರಿತವಾಗಿ ಅಳವಡಿಸಲು ಸೂಚನೆ ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version