ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ವತಿಯಿಂದ ನಿರ್ಮಿಸಿ ಕೊಟ್ಟ ಮನೆ ‘ಸೇವಾಶ್ರಯ’ ಹಸ್ತಾಂತರ : ಸಮಾಜದಲ್ಲಿ ಇನ್ನೊಬ್ಬರಿಗೆ ಸಹಾಯ ಮಾಡುವುದೇ ಜೀವನದ ಭಾಗವಾಗಿರಬೇಕು – ಅರುಣ್ ಪುತ್ತಿಲ

Published

on

ಸುಳ್ಯ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯತ್ ಸಹಕಾರದಲ್ಲಿ ಸುಳ್ಯದ ಪೈಚಾರಿನಲ್ಲಿ ಸುಮತಿ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ ಕಾರ್ಯಕ್ರಮ ಮೇ.26ರಂದು ನಡೆಯಿತು.





ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸ್ಥಾಪಕ ಅರುಣ್ ಕುಮಾ‌ರ್ ಪುತ್ತಿಲ ಮಾತನಾಡಿ , ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಲ್ಪನೆಯಂತೆ ಸೇವೆ ಎಂಬ ಯಜ್ಞದಲ್ಲಿ ಸವಿದೆಯಂತೆ ಉರಿದು ಸಮಾಜದಲ್ಲಿ ಮತ್ತೊಬ್ಬರಿಗೆ ಸಹಾಯ ಮಾಡುವುದೇ ನಮ್ಮ ಜೀವನದ ಭಾಗವಾಗಿರಬೇಕು. ಈ ಮೂಲಕ ನಮ್ಮ ಜೀವನ ಸಾರ್ಥಕವಾಗಿಸಬೇಕು ಎಂದರು.ಸೇವೆಯ ಕಲ್ಪನೆಯ ಮೂಲಕ ಕಷ್ಟದಲ್ಲಿ ಇರುವವರಿಗೆ ಸಹಾಯ ನೀಡಬೇಕೆಂಬ ಕಾರಣದಿಂದ ಎಲ್ಲರ ಸಹಕಾರದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದೆ. ಅಶಕ್ತರ, ಶೋಷಿತರ ಪರವಾಗಿ ನಿಂತು ಅವರ ಸಂತೋಷ ನಮ್ಮ ಸಂತೋಷ ಎಂದು ತಿಳಿದು ಸೇವೆ ಮಾಡಿದಾಗ ಬದುಕಿನಲ್ಲಿ ನೆಮ್ಮದಿಯನ್ನು ದೊರೆಯಲು ಸಾಧ್ಯ ಈ ರೀತಿಯ ಸೇವೆಯಿಂದ ಬದುಕಿನಲ್ಲಿ ನೆಮ್ಮದಿ ಮತ್ತು ಸಾರ್ಥಕತೆ ಪಡೆಯಲು ಸಾಧ್ಯ ಎಂದ ಅವರು ಮನುಷ್ಯತ್ವ, ಹೃದಯ ಶ್ರೀಮಂತಿಕೆ ಎಲ್ಲರಲ್ಲಿ ಇರಲಿ, ಆ ಮೂಲಕ ಹಿರಿಯರ ಕಲ್ಪನೆ ಸಾಕಾರಗೊಳ್ಳುತ್ತದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Advertisement