Published
10 months agoon
By
Akkare Newsಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗಾಂಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕಂಪೆನಿಯೊಂದಕ್ಕೆ 2000 ಮಹಿಳಾ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಿದೆ.
Job opportunity sign or stamp on white background, vector illustration
ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ನಾಲ್ಕು ಫೋಟೋ, ಆಧಾರ್ ಕಾರ್ಡು, ಪಾನ್ ಕಾರ್ಡು ಲಗತ್ತಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಸಹಿತ ತರಬೇತಿ ಕಾರ್ಯವೂ ನಡೆಯಲಿದೆ.
ಪುರುಷರಿಗೆ: ಐಟಿಐ, ವೆಲ್ಡರ್ ಹಾಗೂ ಟೆಕ್ನಿಷಿಯನ್ ಪುರುಷ ಅಭ್ಯರ್ಥಿಗಳಿಗೂ ಕಂಪೆನಿಯಲ್ಲಿ ಉದ್ಯೋಗವಕಾಶವಿದ್ದು ವಿದ್ಯಾವಂತ ಉದ್ಯೋಗಾಕಾಂಕ್ಷಿಗಳು ಇದರ ಪ್ರಯೋಜನವವನ್ನು ಪಡೆದುಕೊಳ್ಳುವಂತೆ ಟ್ರಸ್ಟ್‌ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.
ಟ್ರಸ್ಟ್ ಕಚೇರಿಯಲ್ಲಿ ಅರ್ಜಿ ಸ್ವೀಕಾರ: ಅಭ್ಯರ್ಥಿಗಳು ಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಯನ್ನು ರೈ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಟ್ರಸ್ಟ್ ಕಚೇರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಉತ್ತಮ ಕಂಪೆನಿಯ ಜೊತೆ ಟೈಅಪ್ ಮಾಡಿಕೊಂಡು ತನ್ನ ವಿಧಾನಸಭಾ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದೇನೆ. ಅಭ್ಯರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಈ ಕಂಪೆನಿಯಲ್ಲಿ ಉದ್ಯೋಗಕ್ಕೆ ಸೇರಿಕೊಳ್ಳಬಹುದಾಗಿದೆ. ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ವ್ಯಾಪ್ತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಉತ್ತಮ ವೇತನ ಮತ್ತು ಇತರೆ ಸೌಲಭ್ಯಗಳನ್ನು ಕಂಪೆನಿ ಒದಗಿಸಲಿದೆ. ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ, ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.