Published
12 months agoon
By
Akkare Newsಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂ ಪೇರಿತ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಶುಕ್ರವಾರ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ನಮಾಝ್ ನಿರ್ವಹಿಸಿರುವ ವೀಡಿಯೋ ವೈರಲ್ ಆಗಿತ್ತು. ನಮಾಝ್ ನಿರ್ವಹಿಸಿದ್ದಕ್ಕೆ ಸಂಘಪರಿವಾರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೆ ಪೊಲೀಸರು ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದರು. ಪೊಲೀಸರ ಕ್ರಮಕ್ಕೆ ಮುಸ್ಲಿಮ್ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು.
ನಿನ್ನೆ ಮುಸ್ಲಿಮ್ ನಾಯಕರ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಕೇಸ್ ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು. ಕೇಶ್ ವಾಪಸ್ ಪಡೆಯದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದರು. ಎಸ್ ಡಿಪಿಐ ಪಕ್ಷ ನಾಳೆ ಶುಕ್ರವಾರ ಪ್ರತಿಭಟನೆ ಕೂಡ ಹಮ್ಮಿಕೊಂಡಿತ್ತು.ಇದೀಗ ಮಂಗಳೂರು ನಗರ ಪೊಲೀಸ್ ಆಯುಕ್ತರ ಸೂಚನೆಯಂತೆ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸುಮೊಟೊ ಕೇಸ್(ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್) ಅನ್ನು ಪೊಲೀಸರು ವಾಪಸ್ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.