ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಬ್ರೇಕಿಂಗ್ ನ್ಯೂಸ್

ಬಿಗ್ ಬ್ರೇಕಿಂಗ್ ನ್ಯೂಸ್ ಕೆಲವೇ ಗಂಟೆಗಳಲ್ಲಿ ಪ್ರಜ್ವಲ್ ರೇವಣ್ಣ ಆಗಮನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ವಿಮಾನ ನಿಲ್ದಾಣದಲ್ಲಿ ಬಂಧನವಾಗುತ್ತಾರಾ ಸಂಸದ ಪ್ರಜ್ವಲ್ ರೇವಣ್ಣ !!!?

Published

on

ಲೈಂಗಿಕ ದೌರ್ಜನ್ಯ ಹಗರಣ ಪ್ರಕಣದಲ್ಲಿ ಇಷ್ಟು ದಿನ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಕೊನೆಗೂ ಬೆಂಗಳೂರಿನತ್ತ ಹೊರಟಿದ್ದಾರೆ. ಪ್ರಜ್ವಲ್ ಆಗಮಿಸುತ್ತಿರುವ LH764 ವಿಮಾನ ಜರ್ಮನಿಯ ಮ್ಯೂನಿಕ್‌ ಏರ್‌ಪೋರ್ಟ್‌ನಿಂದ ಟೇಕಾಫ್ ಆಗಿದೆ. ಈಗಾಗಲೇ ಲಗೇಜ್ ಚೆಕ್ ಇನ್ ಮಾಡಿಸಿರುವ ಪ್ರಜ್ವಲ್​, ಬ್ಯುಸಿನೆಸ್​​ ಕ್ಲಾಸ್​​ ಪ್ರಯಾಣಿಕರ ಜೊತೆ ಕುಳಿತುಕೊಂಡಿದ್ದಾರೆ. ಪ್ರಜ್ವಲ್‌ ರೇವಣ್ಣ 4 ಬ್ಯಾಗ್ ತಂದಿರುವ ಮಾಹಿತಿ ಇದೆ. ಇಂದು ರಾತ್ರಿ 12.40 ಗಂಟೆ ಸುಮಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಸಾಧ್ಯತೆ ಇದೆ.

ಏರ್ ಲುಫ್ತಾನ್ಸ್ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಇರುವ ಮಾಹಿತಿ ಎಸ್ಐಟಿಗೆ ಲಭ್ಯವಾಗಿದೆ. ರಾತ್ರಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿಗೆ ಬರುತ್ತಿದ್ದಂತೆ ವಶಕ್ಕೆ ಪಡೆಯಲು ಅಧಿಕಾರಿಗಳು ಸಜ್ಜಾಗಿದ್ದಾರೆ.

ಮ್ಯೂನಿಕ್ ವಿಮಾನ ನಿಲ್ದಾಣದಿಂದ ಹೊರಟಿರುವ ವಿಮಾನ, ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ಕ್ಕೆ ಬಂದಿಳಿಯಲಿದೆ. ಹೀಗಾಗಿ, ನಿಲ್ದಾಣದಲ್ಲಿಯೇ ಅಧಿಕಾರಿಗಳ ತಂಡ ಬೀಡು ಬಿಟ್ಟಿದೆ. ನಿಲ್ದಾಣದ ವಲಸೆ ಅಧಿಕಾರಿಗಳ ಸಹಾಯದಿಂದ ಪ್ರ ಜ್ವಲ್ ಅವರನ್ನು ವಶಕ್ಕೆ ಪಡೆಯಲಾಗುವುದು ಎಂದು ಎಸ್ಐಟಿ ಮೂಲಗಳಿಂದ ತಿಳಿದು ಬಂದಿದೆ.

ವಿಮಾನ ನಿಲ್ದಾಣ ಹಾಗೂ ಪ್ರಜ್ವಲ್ ಅವರನ್ನು ಎಸ್ಐಟಿ ಅಧಿಕಾರಿಗಳು ಕರೆದೊಯ್ಯಲಿರುವ ಬಳ್ಳಾರಿ ರಸ್ತೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಹೆಚ್ಚಿನ ಸಂಖ್ಯೆ ಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version