Published
7 months agoon
By
Akkare Newsಪುತ್ತೂರು: ಎನ್.ಡಿ.ಎ ಮೈತ್ರಿಕೂಟದ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ ನಡೆಯಿತು.
ಪುತ್ತೂರಿನ ವಕೀಲರ ಸಂಘ, ಪುತ್ತೂರಿನ ನೆಹರುನಗರದ ವಿವೇಕಾನಂದ ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ನರೇಂದ್ರ ಪದವಿಪೂರ್ವ ಕಾಲೇಜು, ಅಂಬಿಕಾ ಪದವಿಪೂರ್ವ ಹಾಗೂ ಪದವಿ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಜೂನಿಯರ್ ಕಾಲೇಜು ಕೊಂಬೆಟ್ಟು, ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು, ಅಕ್ಷಯ ಕಾಲೇಜು ಸಂಪ್ಯ ಇಲ್ಲಿ ಶಿಕ್ಷಕರು ಹಾಗೂ ಶಿಕ್ಷಕೇತರರ ಮತಯಾಚಿಸುವ ಮೂಲಕ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡರ ಜೊತೆ ತೆರಳಿ ಬಿರುಸಿನ ಪ್ರಚಾರ ನಡೆಸಲಾಯಿತು.