Published
7 months agoon
By
Akkare Newsಬೆಂಗಳೂರು: ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ಬಂದ ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಜರ್ಮನಿಯ ಮ್ಯೂನಿಕ್ ನಗರದಿಂದ ಆಗಮಿಸಿದ್ದ ಪ್ರಜ್ವಲ್ ಬಂದಿದ್ದ ಲುಫ್ತಾನ್ಸಾ ವಿಮಾನ ಲ್ಯಾಂಡ್ ನಡುರಾತ್ರಿ ಆಗುತ್ತಿದ್ದಂತೆ ಅಧಿಕಾರಿಗಳು ವಶಕ್ಕೆ ಪಡೆದು ಇಮಿಗ್ರೇಷನ್ ಗೆ ಕರೆತಂದಿದ್ದು ಪರಿಶೀಲನೆ ಮತ್ತು ರಾಜತಾಂತ್ರಿಕ ಪಾಸ್ ಪೋರ್ಟ್ ಹೊಂದಿದ್ದ ಕಾರಣ ಲೋಕಸಭಾ ಸ್ಪೀಕರ್ ಗೆ ಮಾಹಿತಿ ನೀಡಿದ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕಚೇರಿಗೆ ಕರೆದೊಯ್ದಿದ್ದಾರೆ.
ಆಗಮನಕ್ಕಾಗಿ ಕಾಯುತ್ತಿದ್ದ ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ಎಸ್ ಐಟಿ ಕಚೇರಿಯಲ್ಲೂ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಹೆಚ್ಚುವರಿ ಪೊಲೀಸರನ್ನೂ ನಿಯೋಜಿಸಲಾಗಿತ್ತು.
ಇತ್ತೀಚೆಗೆ ವೀಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್, ಮೇ 31ರಂದು ಬೆಂಗಳೂರಿಗೆ ಬರುತ್ತೇನೆ. ಬಳಿಕ ಎಸ್‌ಐಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು.