Published
7 months agoon
By
Akkare Newsಬೆಂಗಳೂರು: ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರು ಬಿಟ್ಟು ತಮ್ಮ ಕುಟುಂಬದ ಸಮೇತ ರೆಸಾರ್ಟ್ ಒಂದಕ್ಕೆ ತೆರಳಿದ್ದಾರೆ.
ಪ್ರಕರಣದಿಂದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬ ತೀವ್ರ ಮುಜುಗರವನ್ನು ಅನುಭವಿಸಿದೆ. ಹೆಚ್ ಡಿ ಕುಮಾರಸ್ವಾಮಿ ತಮ್ಮ ಇಡೀ ಕುಟುಂಬ ಸಮೇತ ರೆಸಾರ್ಟ್ ಒಂದಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಧರ್ಮಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ಸೊಸೆ ರೇವತಿ ಅವರು ಹಾಗೂ ಮೊಮ್ಮಗ ಅವ್ಯಾನ್ ದೇವ್ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜತೆಯಲ್ಲಿದ್ದಾರೆ.
ಏಪ್ರಿಲ್ 26 ರಂದು ಹಾಸನದಲ್ಲಿ ನಡೆದ ಮತದಾನಕ್ಕೂ ಎರಡು ದಿನ ಮೊದಲೇ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈ ಪ್ರಕರಣ ತೀವ್ರ ಸದ್ದು ಮಾಡಿತ್ತು. ಒಂದು ತಿಂಗಳ ಕಾಲ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಕೆಲ ದಿನಗಳ ಹಿಂದೆಯಷ್ಟೇ ನಾನು ಬಂದು ಎಸ್ ಐಟಿ ತನಿಖೆಯಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿರು. ಅದರಂತೆ ಪ್ರಜ್ವಲ್ ರೇವಣ್ಣ ಗುರುವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಎಸ್ ಐ ಟಿ ಅಧಿಕಾರಿಗಳು ಬಂಧಿಸಿದ್ದಾರೆ.