Published
7 months agoon
By
Akkare Newsಕಾಣಿಯೂರು: ದ. ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಕಡಬ, ಬೆಳಂದೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಗ್ರಾಮ ಯೋಜನೆಯಡಿಯಲ್ಲಿ ‘ನಮ್ಮ ಗ್ರಾಮ ನಮ್ಮ ಜವಾಬ್ದಾರಿ ನಮ್ಮ ನಡಿಗೆ – ತ್ಯಾಜ್ಯ ಮುಕ್ತ ಕಡೆಗೆ’ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವು ಬೆಳಂದೂರಿನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಮರಕ್ಕಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್, ಸದಸ್ಯರಾದ ವಿಠಲ ಗೌಡ ಅಗಳಿ, ಪ್ರವೀಣ್ ಕೆರೆನಾರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಪ್ರಗತಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸಿ.ಎ ಬ್ಯಾಂಕ್ ಸಿಬ್ಬಂದಿಗಳು, ಗ್ರಾ.ಪಂ. ಸಿಬ್ಬಂದಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.