Published
7 months agoon
By
Akkare Newsರಾಜೀನಾಮೆ ನೀಡಿದ್ದ ಆಯನೂರು ಮಂಜುನಾಥ್ ಮತ್ತು ಮರಿತಿಬ್ಬೇಗೌಡ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಇಬ್ಬರಿಗೂ ಅವರು ಪ್ರತಿನಿಧಿಸಿದ್ದ ಕ್ಷೇತ್ರಗಳಿಂದಲೇ ಕಾಂಗ್ರೆಸ್ ಕಣಕ್ಕಿಳಿಸಿದೆ. ಕಾಂಗ್ರೆಸ್‌ನ ಚಂದ್ರಶೇಖರ್ ಪಾಟೀಲ್‌ಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ಮತ್ತೂಂದು ಅವಕಾಶ ನೀಡಿದ್ದು, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿ ಗೌಡರಿಗೆ ಅವಕಾಶ ಕೊಟ್ಟಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಿ.ಟಿ. ಶ್ರೀನಿವಾಸ್, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಡಾ| ಕೆ.ಕೆ. ಮಂಜುನಾಥ್ ಕುಮಾರ್ ಕಾಂಗ್ರೆಸ್ ಕಟ್ಟಾಳುವಾಗಿದ್ದಾರೆ.
ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಹುರಿಯಾಳಾಗಿ ಅ.ದೇವೇಗೌಡ ಮರುಆಯ್ಕೆ ಬಯಸಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ| ವೈ.ಎ. ನಾರಾಯಣ ಸ್ವಾಮಿ ಕೂಡ ಮರುಆಯ್ಕೆಯ ವಿಶ್ವಾಸದಲ್ಲಿದ್ದಾರೆ. ಉಳಿದಂತೆ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ|ಧನಂಜಯ್ ಸರ್ಜಿ ಬಿಜೆಪಿಯಿಂದ ಕಣದಲ್ಲಿದ್ದಾರೆ. ಇದೇ ಕ್ಷೇತ್ರದ ಟಿಕೆಟ್ ಬಯಸಿದ್ದ ಮಾಜಿ ಶಾಸಕ ರಘುಮತಿ ಭಟ್ ಬಂಡಾಯ ಅಭ್ಯರ್ಥಿಯಾಗಿದ್ದಾರೆ.
ಜೆಡಿಎಸ್ ನೈಋತ್ಯ ಶಿಕ್ಷಕರ ಕ್ಷೇತ್ರದ ಹಾಲಿ ಸದಸ್ಯ ಭೋಜೇಗೌಡ ಅವರಿಗೆ ಮತ್ತೆ ಟಿಕೆಟ್ ಕೊಟ್ಟಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದು ಕಾಂಗ್ರೆಸ್ ಸೇರಿ ಸ್ಪರ್ಧಿಸುತ್ತಿರುವ ಮರಿತಿಬ್ಬೇಗೌಡ ವಿರುದ್ಧ ಕೆ.ವಿವೇಕಾನಂದ ಅವರನ್ನು ಕಣಕ್ಕಿಳಿಸಿದೆ. ವಾಟಾಳ್ ನಾಗರಾಜ್ ಕೂಡ ಕಣದಲ್ಲಿದ್ದಾರೆ.