Published
7 months agoon
By
Akkare Newsಹೊಸದಿಲ್ಲಿ: ಅಭಿವೃದ್ಧಿ ಹೊಂದಿದ ಭಾರತದ ಪ್ರತಿಜ್ಞೆಗೆ ಸಂದ ಜಯ ಇದಾಗಿದ್ದು, ಮೂರನೇ ಬಾರಿ ದೇಶದಲ್ಲಿ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
2024ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಕಚೇರಿಗೆ ಆಗಮಿಸಿದ್ದಾರೆ. ಈ ವೇಳೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಗೆಲುವಿನ ಬಳಿಕ ಮೋದಿ ಮೊದಲ ಭಾಷಣ ಇದಾಗಿದೆ.
” ಆಂದ್ರಪ್ರದೇಶ ಚಂದ್ರ ಬಾಬು ನಾಯ್ಡು ನೇತೃತ್ವದಲ್ಲಿ ವಿಧಾನಸಭೆ ಗೆದ್ದಿದ್ದೇವೆ. ಬಿಹಾರದ ನಿತೀಶ್ ಕುಮಾರ್ ಅವರು ಎನ್‌ಡಿಎಗೆ ಬೆಂಬಲ ನೀಡಿದ್ದಾರೆ. ಇವರೆಲ್ಲರ ಜತೆಗೂಡಿ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚಿಸಲಿದೆ ” ಎಂದು ತಿಳಿಸಿದರು.
ಕೇರಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಗೆದ್ದಿದೆ. ಈ ಗೆಲುವಿನ ಹಿಂದೆ ಬಿಜೆಪಿ ಕಾರ್ಯಕರ್ತರದ ಬಲಿದಾನವಿದೆ. ಜತೆಗೆ ಮಧ್ಯಪ್ರದೇಶ, ದೆಹಲಿ, ಛತ್ತೀಸ್‌ಘಡ್, ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ತೆಲಂಗಾಣದಲ್ಲಿ ಮುಂಚೂಣಿಯಲ್ಲಿ.
ಇದಕ್ಕೂ ಮುನ್ನ ಮಾತನಾಡಿದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾತನಾಡಿ, ” ಈ ಬಾರಿ ಒಡಿಶಾದಲ್ಲಿ ಪ್ರಧಾನಿ ಮೋದಿಯವರ ನಾಯಕತ್ವದ ಬಲದಿಂದ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸಿದೆ. ಕೆಲವರು 30-40 ಸ್ಥಾನ ಗೆದ್ದು ಸಂಭ್ರಮಿಸುತ್ತಿದ್ದಾರೆ. ಇಡೀ ದೇಶವೇ ಪ್ರಧಾನಿ ಮೋದಿಯವರೊಂದಿಗೆ ನಿಂತಿದೆ ಎಂಬುದನ್ನು ಅವರು ಮರೆತಿದ್ದಾರೆ ” ಎಂದು ಪ್ರತಿ ಪಕ್ಷಗಳನ್ನು ಟೀಕಿಸಿದರು.
ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಜಯಭೇರಿ ಬಾರಿಸಿದ ಹಿನ್ನೆಲೆ ದೆಹಲಿಯ ಬಿಜೆಪಿ ಕಚೇರಿಯ ಮುಂದೆ ಕಾರ್ಯಕರ್ತರು ಜಾಗಟೆ, ಶಂಖ, ಡೋಲು ಬಾರಿಸುತ್ತಾ ಘೋಷಣೆಗಳನ್ನು ಕೂಗಿದರು. ಮೋದಿ ಅವರೆಲ್ಲರಿಗೂ ನಮಿಸುತ್ತಾ ವೇದಿಕೆ ತೆರಳಿ ಮಾತನಾಡಿದರು.