ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳು ಪಡೆದ ವೋಟುಗಳ ಸಂಖ್ಯೆಯ ವಿವರ ಇಲ್ಲಿದೆ!

Published

on

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಿವಿಧ ಪಕ್ಷಗಳು ಪಡೆದ ಮತಗಳ ಸಂಖ್ಯೆಯ ವಿವರ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ 1, 49,208 ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚೌಟ ಅವರ ಪರವಾಗಿ 7,64,132 ಮತಗಳು ಬಿದ್ದಿವೆ. ಚೌಟ ಅವರ ಸಮೀಪದ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ 6,14,924 ಮತ ಪಡೆದು ಸೋಲನ್ನುಂಡಿದ್ದಾರೆ,

ಇನ್ನುಳಿದಂತೆ, ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿ ಕಾಂತಪ್ಪ ಅಲಂಗಾರ್ 4,232 ಮತ ಪಡೆದಿದ್ದಾರೆ. ಕರುನಾಡ ಸೇವಕರ ಪಾರ್ಟಿ ಅಭ್ಯರ್ಥಿ ದುರ್ಗಾ ಪ್ರಸಾದ್ 2,592 ಮತ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಪ್ರಿತ್ ಕುಮಾರ್ ಪೂಜಾರಿ 1,901 ಮತಗಳಿಸಿದ್ದು, ಪಕ್ಷೇತರ ಅಭ್ಯರ್ಥಿ ಮ್ಯಾಕ್ಸಿಮ್ ಪಿಂಟೊ 1,690 ಮತ ಪಡೆದಿದ್ದಾರೆ.

 

ಪಕ್ಷೇತರ ಅಭ್ಯರ್ಥಿ ದೀಪಕ್ ರಾಜೇಶ್ ಕುವೆಲ್ಲೊ 976, ಉತ್ತಮ ಪ್ರಜಾಕೀಯ ಪಾರ್ಟಿ ಪ್ರಜಾಕೀಯ ಮನೋಹರ್ 971, ಕರ್ನಾಟಕ ರಾಷ್ಟ್ರ ಸಮಿತಿ ರಂಜಿನಿ ಎಂ 776 ಮತಗಳಿಸಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ನೋಟಾಗೆ 23,576 ಮತ ಚಲಾವಣೆ ಆಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version