ಪುತ್ತೂರು ಜೂ 7:ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 750 ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳನ್ನು ಉದ್ಯೋಗ ಮೇಳಕ್ಕೆ ಪಾಲ್ಗೊಳ್ಳಲು ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಿಗ್ಗೆ ಅವರಿಗೆ ಶುಭಹಾರೈಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಶ್ರೀ ಸುದೇಶ್ ಶೆಟ್ಟಿ, ಪ್ರಮುಖರಾದ ಶ್ರೀ ಯೋಗೀಶ್ ಸಾಮಾನಿ, ಶ್ರೀ ನಿಹಾಲ್ ಶೆಟ್ಟಿ, ಶ್ರೀ ಶಿವಪ್ರಸಾದ್ ಶೆಟ್ಟಿ, ಶ್ರೀ ರಾಮಣ್ಣ ಪಿಲಿಂಜ ಹಾಗೂ ಸಿಬ್ಬಂದಿಗಳಾದ ಶ್ರೀ ಲಿಂಗಪ್ಪ, ಝುನೈದ್, ರಚನಾ ಉಪಸ್ಥಿತರಿದ್ದರು.