Published
7 months agoon
By
Akkare Newsಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಗೆ ಸೇರಿದ ಮಹಿಳಾ ಸಿಬ್ಬಂದಿಯೊಬ್ಬರು ಗುರುವಾರ ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.
ಭದ್ರತಾ ತಪಾಸಣೆಯ ಸಮಯದಲ್ಲಿ ಕಂಗನಾ ರಣಾವತ್ ತನ್ನ ಮೊಬೈಲ್ ಫೋನ್ ಅನ್ನು ಟ್ರೇನಲ್ಲಿ ಇರಿಸಲು ನಿರಾಕರಿಸಿದ್ದು, ಭದ್ರತಾ ಸಿಬ್ಬಂದಿಯನ್ನು ತಳ್ಳಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.
ಆದರೆ, ಕೆಲ ಮಾಧ್ಯಮಗಳು ಈ ಹಿಂದೆ ಕಂಗನಾ ರಣಾವತ್ ರೈತ ವಿರೋಧಿ ಹೇಳಿಕೆ ಕೊಟ್ಟಿದ್ದರು. ಇದರಿಂದ ಅಸಮಧಾನಗೊಂಡ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದಾರೆ. ಈ ಸಂಬಂಧ ಕುಲ್ವಿಂದರ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿವೆ.
ಜೂನ್ 4ರಂದು ಪ್ರಕಟಗೊಂಡ ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಗೆದ್ದು ಸಂಸದೆಯಾಗಿರುವ ಕಂಗನಾ, ಇಂದು (ಜೂನ್ 6) ಮಧ್ಯಾಹ್ನ 3 ಗಂಟೆಗೆ ವಿಸ್ತಾರಾ ವಿಮಾನದಲ್ಲಿ ದೆಹಲಿಗೆ ಹೊರಟಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಲೋಕಸಭೆ ಚುನಾವಣೆಯಲ್ಲಿ ಕಂಗನಾ 5,37,022 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 74,755 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.