ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಮಾನನಷ್ಟ ಮೊಕದ್ದಮೆ: ಇಂದು ಬೆಂಗಳೂರು ಕೋರ್ಟ್​ಗೆ ರಾಹುಲ್ ಗಾಂಧಿ ಹಾಜರು

Published

on

ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿಯ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಜೂನ್ 7) ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್‌ ಕೇಶವಪ್ರಸಾದ್ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿದ್ದ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್, ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರಿಗೆ ಸಮನ್ಸ್ ನೀಡಿತ್ತು. ಹೀಗಾಗಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಜೂನ್ 1ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯ ಜಾಮೀನು ನೀಡಿತ್ತು.

ಆದರೆ, ರಾಹುಲ್ ಗಾಂಧಿ ಜೂನ್‌ 1ರಂದು ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದರು. ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಜೂನ್‌ 7ರೊಳಗೆ ಹಾಜರಾಗಬೇಕೆಂದು ಆದೇಶಿಸಿತ್ತು.

ಈ ಹಿನ್ನೆಲೆ, ಇಂದು ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಬರಮಾಡಿಕೊಂಡಿದ್ದಾರೆ.

ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿಯಾದರೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಕ್ರಮವಾಗಿ 2,3 ಮತ್ತು 4ನೇ ಆರೋಪಿಗಳಾಗಿದ್ದಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version