ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಕೊಯಮತೂರು ಒಂದು ಬೂತ್ ನಲ್ಲಿ ಕೇವಲ ಒಂದು ಮತ ಪಡೆದ ಅಣ್ಣಾಮಲೈ…!!! ಕೊಯಮತ್ತೂರ್ ಮತದಾರರು ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ರನ್ನು ತಿರಸ್ಕಾರ ಮಾಡಿದಾದರೂ ಯಾಕೇ…?

Published

on

ಬಿಜೆಪಿಯ ಭವಿಷ್ಯದ ಪ್ರಧಾನಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಒಂದು ಬೂತ್‌ನಲ್ಲಿ ಕೇವಲ 1 ಮತ ಪಡೆದಿದ್ದಾರೆ, ಕೊಯಮತ್ತೂರಿನ ಜನರ ವಿಶ್ವಾಸವನ್ನು ಗಳಿಸುವಲ್ಲಿ ಅಣ್ಣಾಮಲೈ ವಿಫಲರಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

2024ರ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದಿದೆ. ತಮಿಳುನಾಡಿನಲ್ಲಿ ಕಮಲವನ್ನು ಅಳಿಸುತ್ತೇನೆ ಎಂದು ಪಣತೊಟ್ಟಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸೋತಿದ್ದಾರೆ. ಡಿಎಂಕೆ ಅಭ್ಯರ್ಥಿ ಗಣಪತಿ ಅಣ್ಣಾಮಲೈ ವಿರುದ್ಧ ಗೆದ್ದಿದ್ದಾರೆ. ಕೊಯಮತ್ತೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅಣ್ಣಾಮಲೈ  ಒಂದು ಬೂತ್‌ನಲ್ಲಿ ಕೇವಲ ಒಂದು ಮತ ಪಡೆದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

 

ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಇದೇ ಫೋಟೋವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು  ಗೂಗಲ್‌ನಲ್ಲಿ ರಿವರ್ಸ್‌ ಇಮೇಜನಲ್ಲಿ ಸರ್ಚ್‌ ಮಾಡಿದಾಗ, ವೈರಲ್ ಚಿತ್ರವನ್ನು ತಮಿಳುನಾಡಿನ ಬಿಜೆಪಿ ಯುವ ಘಟಕದ ಉಸ್ತುವಾರಿ ಪ್ರವೀಣ್ ರಾಜ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಇದೊಂದು ತಿರುಚಿದ ಫೋಟೋ ಎಂದು ಸ್ಪಷ್ಟನೆ ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version