ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ವಿವಾದಿತ ‘ಹಮಾರೆ ಬಾರಾಹ್’ ಸಿನಿಮಾ ಕರ್ನಾಟಕದಲ್ಲಿ ನಿಷೇಧ

Published

on

ಬೆಂಗಳೂರು : ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸುವ ಆರೋಪ ಹೊತ್ತಿರುವ ಹಿಂದಿ ಭಾಷೆಯ “ಹಮಾರೆ ಬಾರಾಹ್” ಸಿನೆಮಾವನ್ನು ಕರ್ನಾಟಕದಲ್ಲಿ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಸಿನಿಮಾ ರೆಗ್ಯುಲೇಷನ್ ಕಾಯ್ದೆ 1964, ಸೆಕ್ಷನ್ 15 (1) ಮತ್ತು 15(5) ರ ಅನ್ವಯ ಈ ಸಿನಿಮಾದ ಪ್ರದರ್ಶನವನ್ನು ರಾಜ್ಯದಲ್ಲಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಸಿನಿಮಾದ ಪ್ರದರ್ಶನದಿಂದ ರಾಜ್ಯದಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ಆಗುತ್ತದೆ ಎಂಬ ಕಾರಣ ನೀಡಿ ಸಿನಿಮಾವನ್ನು ಬ್ಯಾನ್ ಮಾಡಲಾಗಿದೆ.

ಇನ್ನು ಈ ವಿವಾದಿತ ಸಿನಿಮಾದ ವಿರುಧ್ದ ಕರ್ನಾಟಕದಲ್ಲಿ ಎಸ್.ಡಿ.ಪಿ.ಐ ರಾಜ್ಯಾದ್ಯಂತ ಹೋರಾಟ ನಡೆಸಿದ್ದು, ಸರಕಾರಕ್ಕೆ ಮನವಿ ಮಾಡಿತ್ತು. ಇದರ ಫಲವಾಗಿ ಇಂದು ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಈ ಸಿನಿಮಾ ಪ್ರಸಾರಕ್ಕೆ ನಿಷೇಧ ಹೇರಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version