ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!Published
7 months agoon
By
Akkare Newsಮಂಗಳೂರು: ಸಿಆರ್‌ಝಡ್ ಪ್ರದೇಶದಲ್ಲಿ ಮರಳು ತೆಗೆಯುವುದಕ್ಕೆ ಪೂರಕವಾದ ಪ್ರಕ್ರಿಯೆಗಳನ್ನು ಮೂರು ತಿಂಗಳಿನಲ್ಲಿ ಪೂರ್ಣಗೊಳಿಸಿ, ಮರಳಿಗೆ ಯಾವುದೇ ಸಮಸ್ಯೆಯಾಗ ದಂತೆ ಜಿಲ್ಲಾಡಳಿತ, ಗಣಿ ಇಲಾಖೆ ನೋಡಿಕೊಳ್ಳಬೇಕು ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಿರ್ಧರಿಸಿದೆ.
2023ರ ಮೇ ತಿಂಗಳ ಬಳಿಕ ಜಿಲ್ಲೆಯಲ್ಲಿ ಸಿಆರ್‌ಝಡ್ ಪ್ರದೇಶದ ಮರಳು ತೆಗೆಯುವುದು ಸಾಧ್ಯವಾಗಿಲ್ಲ. ಹೊಸ ಸಿಆರ್‌ಝಡ್ ನಿಯಮಗಳು ಜಾರಿಗೆ ಬಂದಿದ್ದರೂ ಮರಳು ತೆರವಿನ ಕುರಿತು ಮಾರ್ಗಸೂಚಿಗಳು ಇನ್ನೂ ಬಾರದಿರುವುದರ ಹಿನ್ನೆಲೆಯಲ್ಲಿ ಮರಳು ತೆಗೆಯುವುದಕ್ಕೆ ಜಿಲ್ಲಾಡಳಿತ ಅನುಮೋದನೆ ನೀಡಿಲ್ಲ. ಈ ಹಿನ್ನೆಲೆ ಯಲ್ಲಿ ಬೆಂಗಳೂರಿನ ವಿಕಾಸ ಸೌಧದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸ್ಪೀಕರ್ ಖಾದರ್ ಅವರು, ಜನರ ಸಮಸ್ಯೆಗೆ ಸ್ಪಂದಿಸಿ ಮರಳಿನ ಸಮಸ್ಯೆ ನಿವಾರಿಸಬೇಕು, ಉತ್ತರಕನ್ನಡ ಜಿಲ್ಲೆಯಲ್ಲಿ ಸಿಆರ್‌ಝಡ್ ವಲಯದಲ್ಲಿ ಮರಳು ತೆಗೆಯಲು ಅನುಮತಿ ನೀಡಿರುವಾಗ ನಮ್ಮಲ್ಲಿ ಯಾಕೆ ಸಾಧ್ಯ ವಾಗಿಲ್ಲ ಎಂದು ಪ್ರಶ್ನಿಸಿದರು.
3 ತಿಂಗಳಲ್ಲಿ ನಿಷೇಧ ಪೂರ್ಣಗೊಳ್ಳು ತ್ತದೆ. ಅಷ್ಟು ಹೊತ್ತಿಗೆ ಮರಳು ತೆಗೆ ಯಲು ಬೇಕಾದ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅವರು ದ.ಕ ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.
ಕಡಲ್ಕೊರೆತ ತುರ್ತು ನಿಧಿ
ಉಳ್ಳಾಲದ ಕಡಲತಡಿಯಲ್ಲಿ ಕಲ್ಲು ಪೇರಿಸುವುದಕ್ಕಾಗಿ ಜಿಲ್ಲಾಧಿಕಾರಿ ತುರ್ತು ನಿಧಿ ಬಿಡುಗಡೆಗೊಳಿಸಬೇಕು. ಅಲ್ಲದೆ ತ್ವರಿತವಾಗಿ ಕಾಮಗಾರಿಗೆ ಅವಕಾಶ ಮಾಡಿಕೊಡಬೇಕು ಎಂದರು.
ಸೋಮೇಶ್ವರ ಬಟ್ಟಂಪಾಡಿಯಿಂದ ತಲಪಾಡಿ ವರೆಗೆ 800 ಮೀಟರ್ ಉದ್ದದಲ್ಲಿ ತಡೆಗೋಡೆ ನಿರ್ಮಾಣಕ್ಕೆ 88 ಕೋಟಿ ರೂ. ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅಲ್ಲದೆ ಸೋಮೇಶ್ವರದಲ್ಲಿ ಕ್ರೂಸ್ ಹಡಗು ಗಳಿಗೆ 2,030 ಕೋಟಿ ರೂ. ವೆಚ್ಚದಲ್ಲಿ ಜೆಟ್ಟಿ ನಿರ್ಮಾಣ ಮಾಡುವ ಪ್ರಸ್ತಾವ ವನ್ನು ಅನುಮೋದಿಸಲಾಗಿದೆ. ಈ ಯೋಜನೆಯನ್ನು ಕೇಂದ್ರ-ರಾಜ್ಯ ಸಹಭಾಗಿತ್ವದಲ್ಲಿ ಪಿಪಿಪಿ ಮಾದರಿ ಯಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಖಾದರ್ ಉದಯವಾಣಿಗೆ ವಿವರಿಸಿದರು.
ಮಂಗಳೂರು ನಗರಕ್ಕೆ ಸಂಬಂಧಿಸಿಂತೆ ವಲಯ ನಿಯಮಾವಳಿ, ಕಟ್ಟಡ ನಿಯಮಾವಳಿ ಕರಡು ಬಿಡುಗಡೆ ಮಾಡುವುದಕ್ಕೂ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಾವೇರಿ-2 ತಂತ್ರಾಂಶದಡಿ ಯಲ್ಲಿ ಭೂಮಿ ನೋಂದಣಿ ನಿಧಾನ ವಾಗಿರುವುದು, ಸರ್ವರ್ ಸಮಸ್ಯೆ ಕುರಿತು ಚರ್ಚೆ ಮಾಡಲಾಗಿದೆ.
ಸಚಿವರಾದ ದಿನೇಶ್ ಗುಂಡೂ ರಾವ್, ಮಂಕಾಳ ವೈದ್ಯ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅತೀಕ್, ಬಂದರು ಇಲಾಖೆಯ ಮಂಜುಳಾ, ಮೀನುಗಾರಿಕಾ ಇಲಾಖೆಯ ನಾಗ ಭೂಷಣ್, ಗಣಿ ಇಲಾಖೆಯ ವಿನ್ಸಂಟ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಭೆಯಲ್ಲಿ ಪಾಲ್ಗೊಂಡರು.