Published
7 months agoon
By
Akkare Newsಹೈದರಾಬಾದ್: ಮಾಧ್ಯಮ ರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ರಾಮೋಜಿ ಗ್ರೂಪ್ಸ್ ಸಂಸ್ಥಾಪಕ ರಾಮೋಜಿ ರಾವ್ ಅವರು ಇಹಲೋಕ ತ್ಯಜಿಸಿದ್ದಾರೆ. ಜೂನ್ 8 ಶನಿವಾರ ಬೆಳಗ್ಗೆ 4.50ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ರಾಮೋಜಿ ರಾವ್ ಅವರಿಗೆ 87 ವರ್ಷ ವಯಸ್ಸಾಗಿತ್ತು.ರಾಮೋಜಿ ರಾವ್ ಅವರನ್ನು ಜೂನ್ 5 ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೈದರಾಬಾದ್‌ನ ನಾನಾಕರಮ್‌ಗುಡದಲ್ಲಿ ಇರುವ ಸ್ಟಾರ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವಯೋ ಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.