ಮೂಡುಬಿದಿರೆ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿ ಬೈಕ್ ಗಳು ಮತ್ತು ಕೋಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿರ್ತಾಡಿ ಗ್ರಾಮದ ಮಕ್ಕಿ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ಪೊಲೀಸರು ದಾಳಿ ಮಾಡಿದ್ದಾರೆ.
ದಾಳಿಯ ವೇಳೆ ಜೂಜಾಡುತ್ತಿದ್ದವರು ಬೈಕ್ ಕೋಳಿಗಳನ್ನು ಬಿಟ್ಟು ಪರಾರಿಯಾಗಿದ್ದರು. ಕೋಳಿ ಅಂಕದಲ್ಲಿ ಪಾಲ್ಗೊಂಡಿದ್ದವರ 3 ಬೈಕ್‌ಗಳು, 6 ಅಂಕದ ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಳಿ ಅಂಕದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕರೂ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.